ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಿಗದಿಯಾಗಿದ್ದ ರಾಹುಲ್ ಗಾಂಧಿ ನೇತೃತ್ವದ ಪ್ರತಿಭಟನಾ ರ್ಯಾಲಿ ಆಗಸ್ಟ್ 8ಕ್ಕೆ ಮುಂದೂಡಿಕೆಯಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತಗಳ್ಳತನ ಆರೋಪ ಮಾಡಿದ್ದರು. ಕೇಂದ್ರದ ಈ ಕ್ರಮ ವಿರೋಧಿಸಿ ಆಗಸ್ಟ್ 5ರಂದು ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಿಗದಿಯಾಗಿತ್ತು. ಇದೇ ಸಮಯದಲ್ಲಿ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ನಡುವೆ ಪ್ರತಿಭಟನಾ ರ್ಯಾಲಿ ಮುಂದೂಡಿರುವುದಾಗಿ ಡಿಸಿಎಂ ತಿಳಿಸಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ರಣದೀಪ್ ಸುರ್ಜೇವಾಲ ಮಾತನಾಡಿದರು, ಶಿಬು ಸೊರೇನ್ ಅವರ ಮರಣದ ಹಿನ್ನೆಲೆಯಲ್ಲಿ ನಾಳೆ ಅಂತ್ಯ ಸಂಸ್ಕಾರ ನಡೆಯಲಿದೆ. ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅದರಲ್ಲಿ ಭಾಗವಹಿಸಿದ್ದಾರೆ. ಆದ್ದರಿಂದ ನಾಳೆಯ ಪ್ರತಿಭಟನೆ ಮುಂದೂಡಲಾಗಿದೆ. ಅದನ್ನ ಆ.8ಕ್ಕೆ ನಡೆಸಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.