ಹೊಸದಿಗಂತ ವಿಜಯಪುರ:
ಹದಗೆಟ್ಟ ರಸ್ತೆಯಿಂದ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಮನ್ನಾಪುರ ಬಳಿ ನಡೆದಿದೆ.
ಸಿಂದಗಿ- ಹೊನ್ನಳ್ಳಿ ಬಸ್ ಪಲ್ಟಿಯಾಗಿದ್ದು, ಯಾವುದೇ ರೀತಿ ಪ್ರಾಣ ಹಾನಿಯಾಗಿಲ್ಲ. ಬಸ್‌ನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು
ಚಿಕಿತ್ಸೆಗಾಗಿ ಸಿಂದಗಿ ತಾಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.