ಹೊಸದಿಗಂತ ರಾಯಚೂರು:
ಹೊಸದಿಗಂತ ಪತ್ರಿಕೆಯ ತಾಲೂಕು ವರದಿಗಾರರ ಹಿರಿಯ ಪತ್ರಕರ್ತ ಡಿ. ಶರಣೇಗೌಡ ಗೊರೇಬಾಳ (55) ನಿಧನರಾಗಿದ್ದಾರೆ.
ಇವರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
ಇವರು ಕೆಲ ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಇತ್ತೀಚೆಗೆ ಇವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮದ್ಯಾಹ್ನ ನಿಧನರಾಗಿದ್ದಾರೆ.
ಇವರು ಹಲವು ವರ್ಷಗಳಿಂದ ಹೊಸದಿಗಂತ ಪತ್ರಿಕೆಯ ತಾಲೂಕಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕಾ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಕಳೆದ ಎರಡು ದಶಕಗಳಿಂದ ಪತ್ರಿಕಾ ವೃತ್ತಿಯಲ್ಲಿದ್ದ ಅವರು, ಜಿಲ್ಲಾ ಹಾಗೂ ರಾಜ್ಯಮಟ್ಟದ ಪತ್ರಿಕೆಗಳಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿದ ಅವರು ಪತ್ರಿಕಾ ರಂಗದ ಜೊತೆ ಜೊತೆಗೆ ಕೇಬಲ್ ನೆಟ್ವರ್ಕ್ ವಲಯದಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರ ಅಂತ್ಯಕ್ರಿಯೆ ತಾಲ್ಲೂಕಿನ ಗೊರೇಬಾಳ ಕ್ಯಾಂಪಿನ ರುದ್ರಭೂಮಿಯಲ್ಲಿ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಸಂತಾಪ :
ಡಿ.ಶರಣೇಗೌಡ ಗೊರೇಬಾಳ ಅವರ ನಿಧನಕ್ಕೆ ಹೊಸದಿಗಂತ ಪತ್ರಿಕೆಯ ಬಳಗ ಹಾಗೂ ಜಿಲ್ಲಾ ಹಾಗೂ ತಾಲ್ಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳು, ಜಿಲ್ಲೆಯ ಪತ್ರಕರ್ತರು ಸಂತಾಪ ಸೂಚಿಸಿದ್ದಾರೆ.