ಬೆಂಗಳೂರಿನ ವಿಕ್ಟೊರಿಯ ಆಸ್ಪತ್ರೆಗೆ CM ಸಿದ್ದರಾಮಯ್ಯ ದಿಢೀರ್ ಭೇಟಿ: ರೋಗಿಗಳ ಆರೋಗ್ಯ ವಿಚಾರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ವಿಕ್ಟೊರಿಯ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ದಿಢೀರ್ ಭೇಟಿ ನೀಡಿದ್ದು, ರೋಗಿಗಳ ಆರೋಗ್ಯ ವಿಚಾರಣೆ ನಡೆಸಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಯ ಹೊರರೋಗಿಗಳ ವಿಭಾಗಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು, ಹೊರ ರೋಗಿಗಳ ಸಮಸ್ಯೆಗಳನ್ನು ಆಲಿಸಿದರು.

ರೋಗಿಗಳಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರಕುತ್ತಿದೆಯೇ? ಚಿಕಿತ್ಸೆ ಪಡೆಯುವಲ್ಲಿ ಏನಾದರೂ ಅಡೆತಡೆಗಳಿವೆಯೇ? ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳ‌ ಸ್ಪಂದನೆ ಹೇಗಿದೆ? ಎಂಬುದನ್ನು ಸ್ವತಃ ರೋಗಿಗಳಿಂದಲೇ ಮಾಹಿತಿ ಪಡೆದರು.

ಸರ್ಕಾರಿ‌ ಆಸ್ಪತ್ರೆಗೆ ಬರುವ ರೋಗಿಗಳಲ್ಲಿ ಬಹುತೇಕರು ಬಡವರು. ಖಾಸಗಿ ಆಸ್ಪತ್ರೆಯ ವೆಚ್ಚ ಭರಿಸಲಾಗದ ಕಾರಣಕ್ಕಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರೆ. ಆರ್ಥಿಕ ಪರಿಸ್ಥಿತಿಯ ಕಾರಣಕ್ಕೆ ಯಾವೊಬ್ಬ ರೋಗಿಯು ಗುಣಮಟ್ಟದ ಚಿಕಿತ್ಸೆಯಿಂದ ವಂಚಿತನಾಗಬಾರದೆಂದು ಸರ್ಕಾರಿ‌ ಆಸ್ಪತ್ರೆಗಳಿಗೆ ಅಗತ್ಯ ವೈದ್ಯಕೀಯ ಸಿಬ್ಬಂದಿ ಹಾಗೂ ಸಲಕರಣೆಗಳನ್ನು ಒದಗಿಸಲಾಗಿದೆ. ಆದ್ದರಿಂದ ಸರ್ಕಾರಿ‌ ಆಸ್ಪತ್ರೆಗಳು ಕೂಡ ಖಾಸಗಿ ಆಸ್ಪತ್ರೆಗಳಂತೆ ಉತ್ತಮ ಸೇವೆ, ಉತ್ಕೃಷ್ಟ ಸೌಲಭ್ಯ ಒದಗಿಸಲೇಬೇಕು. ಈ ವಿಷಯದಲ್ಲಿ ಯಾವ ರಾಜಿಯೂ ಇಲ್ಲ ಎಂದು ನಿರ್ದೇಶನ ನೀಡಿದರು.

ಈ ವೇಳೆ ಸಿಎಂ ಸಿದ್ದರಾಮಯ್ಯಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಸಾಥ್ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!