ಹೊಸದಿಗಂತ ಡಿಜಿಟಲ್ ಡೆಸ್ಕ್:
ರಷ್ಯಾದಿಂದ ತೈಲ ಖರೀದಿ ಮಾಡುತ್ತಿರುವ ಭಾರತದ ಮೇಲೆ ಹೆಚ್ಚುವರಿ ಸುಂಕ ವಿಧಿಸುವುದಾಗಿ ಬೆದರಿಕೆ ಹಾಕಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಭಾರತದ ಮೇಲೆ ಹೆಚ್ಚುವರಿ ಶೇ.25 ವ್ಯಾಪಾರ ಸುಂಕವನ್ನು ಘೋಷಿಸಿದ್ದಾರೆ.
ಇದೀಗ ಹೇಳಿದಂತೆಯೇ ಮಾಡಿರುವ ಟ್ರಂಪ್ ಭಾರತದ ಮೇಲೆ ಬರೋಬ್ಬರಿ ಶೇ. 25ರಷ್ಟು ಹೆಚ್ಚುವರಿ ಸುಂಕ ವಿಧಿಸಿದ್ದು, ಈ ಮೂಲಕ ಒಟ್ಟು ಸುಂಕದ ಪ್ರಮಾಣ ಶೇ. 50ರಷ್ಟಾಗಿದೆ.
ರಷ್ಯಾದಿಂದ ತೈಲ ಖರೀದಿಗೆ ಸಂಬಂಧಿಸಿದಂತೆ ಭಾರತದ ಮೇಲೆ ಟ್ರಂಪ್ ತನ್ನ ವಿರೋಧವನ್ನು ಹೆಚ್ಚಿಸಿದ ಒಂದು ದಿನದ ನಂತರ, ಮುಂದಿನ 24 ಗಂಟೆಗಳಲ್ಲಿ ಹೆಚ್ಚುವರಿ ಸುಂಕಗಳನ್ನು ವಿಧಿಸುವುದಾಗಿ ಎಚ್ಚರಿಸಿದ್ದರು.
ಆಗಸ್ಟ್ 27ರಿಂದ ಜಾರಿಗೆ ಬರಲಿರುವ ಈ ಕಾರ್ಯಕಾರಿ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ.
ಜುಲೈ 30ರಂದು ಟ್ರಂಪ್ ಆಗಸ್ಟ್ 1ರಿಂದ ಭಾರತೀಯ ಆಮದುಗಳ ಮೇಲೆ ಶೇ.25ರಷ್ಟು ಸುಂಕ ವಿಧಿಸಲಾಗುವುದು ಮತ್ತು ಹೆಚ್ಚುವರಿ ಅನಿರ್ದಿಷ್ಟ ದಂಡ ವಿಧಿಸಲಾಗುವುದು ಎಂದು ಘೋಷಿಸಿದ್ದರು. ಅದಾದ ಬಳಿಕ ರಷ್ಯಾದಿಂದ ತೈಲ ಖರೀದಿ ಮಾಡುತ್ತಿರುವ ಭಾರತದ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭಾರತಕ್ಕೆ ಎಚ್ಚರಿಕೆ ನೀಡಿದ್ದರು. ಅದರಂತೆ ಇಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಹೆಚ್ಚುವರಿ 25% ವ್ಯಾಪಾರ ಸುಂಕವನ್ನು ಘೋಷಿಸಿದ್ದಾರೆ.