February 8, 2026
Sunday, February 8, 2026
spot_img

ಒಂದಲ್ಲ, ಎರಡಲ್ಲ.. ಬರೋಬ್ಬರಿ 40! ಕನಕಪುರದ ಕಾಡಂಚಿನ ಗ್ರಾಮದಲ್ಲಿ ಗರ್ಜಿಸಿದ ಗಜಪಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನಕಪುರ ತಾಲೂಕಿನ ಕಾಡುಶಿವನಹಳ್ಳಿ ಗ್ರಾಮದ ಬಳಿ ಸುಮಾರು 40ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ತಮಿಳುನಾಡು ಅರಣ್ಯ ವಲಯದಿಂದ ಬನ್ನೇರುಘಟ್ಟ ವನ್ಯಜೀವಿ ವಲಯಕ್ಕೆ ವಲಸೆ ಬಂದಿರುವ ಈ ಬೃಹತ್ ಗಜಪಡೆ, ಕಾಡಂಚಿನ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿ ಮಾಡಿದೆ.

ಶನಿವಾರ ಸಂಜೆ ಗ್ರಾಮದ ಹೊರವಲಯದಲ್ಲಿ ಏಕಾಏಕಿ ಇಷ್ಟು ದೊಡ್ಡ ಸಂಖ್ಯೆಯ ಆನೆಗಳನ್ನು ಕಂಡ ಜನರು ಬೆಚ್ಚಿಬಿದ್ದಿದ್ದಾರೆ. ಕೂಡಲೇ ಎಚ್ಚೆತ್ತ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ರವಾನಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಬನ್ನೇರುಘಟ್ಟ ಅರಣ್ಯ ಇಲಾಖೆಯ ಸಿಬ್ಬಂದಿ, ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಆನೆಗಳನ್ನು ಯಶಸ್ವಿಯಾಗಿ ಕಾಡಿಗೆ ಅಟ್ಟಿದ್ದಾರೆ.

ಇದನ್ನೂ ಓದಿ:

ಒಂದೇ ಕಡೆ 40 ಆನೆಗಳು ಸಾಲಾಗಿ ಸಂಚರಿಸುತ್ತಿರುವ ಅಪರೂಪದ ದೃಶ್ಯ ಅರಣ್ಯ ಇಲಾಖೆ ಸಿಬ್ಬಂದಿಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪ್ರಸ್ತುತ ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಕಾಡಂಚಿನ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !