ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಮೆಟ್ರೋ ಕನೆಕ್ಟಿವಿಟಿ ಸುಮಾರು 100 ಕಿ.ಮೀ ತಲುಪಲು ಅದಕ್ಕೆ ನರೇಂದ್ರ ಮೋದಿಯವರ ಸರ್ಕಾರ ಮತ್ತು ಪ್ರಧಾನಿಯವರು ಬೆಂಗಳೂರಿನ ಮೂಲಭೂತ ಸೌಕರ್ಯಕ್ಕೆ ಕೊಟ್ಟ ಆದ್ಯತೆಯೇ ಕಾರಣ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಪ್ರಧಾನಿಯವರನ್ನು ಯಾರು ಕರೆಸಿದರು ಎಂಬುದಕ್ಕೆ ಉತ್ತರಿಸುವ ಅಗತ್ಯವಿಲ್ಲ. ಬೆಂಗಳೂರಿನ ಮೆಟ್ರೋ ಆದಷ್ಟು ಬೇಗ ಉದ್ಘಾಟನೆ ಆಗಬೇಕು, ವಿಳಂಬ ಸಲ್ಲದೆಂದು ಪ್ರಧಾನಿಯವರು ದಿನಾಂಕ ನಿಗದಿಪಡಿಸಿ ಬರುತ್ತಿದ್ದಾರೆ. ಅವರ ಆಗಮಿಸುವಿಕೆಯನ್ನು ರಾಜ್ಯ ಸರ್ಕಾರ, ಬಿಜೆಪಿ, ಇಲ್ಲಿನ ಜನತೆ ಉತ್ಸಾಹ, ಹಬ್ಬದಂತೆ ಸ್ವಾಗತಿಸಲು ಸಜ್ಜಾಗಬೇಕಿದೆ. ಅಂತೆಯೇ ಅವರ ಸ್ವಾಗತ ಕಾರ್ಯಕ್ಕೆ ಎಲ್ಲರೂ ಸಜ್ಜಾಗಿದ್ದಾರೆ ಎಂದು ತಿಳಿಸಿದರು.
ರಾಜ್ಯ ಸರ್ಕಾರ ಅದರಲ್ಲೂ ವಿಶೇಷವಾಗಿ ಉಪಮುಖ್ಯಮಂತ್ರಿಗಳು ಬುಧವಾರ ಯೆಲ್ಲೋ ಲೈನಿನ ಮೆಟ್ರೋದಲ್ಲಿ ಓಡಾಡಿದರು. ಇದು ಶೇ 50-50ರ ಯೋಜನೆ. ನಮ್ಮದೂ ದೊಡ್ಡ ಕೊಡುಗೆ ಇದೆ ಎಂದಿದ್ದಾರೆ. ಕಳೆದ ಎರಡೂವರೆ ವರ್ಷಗಳಲ್ಲಿ ಮುಖ್ಯಮಂತ್ರಿ- ಉಪ ಮುಖ್ಯಮಂತ್ರಿಗಳು ಯೆಲ್ಲೋ ಲೈನಿನ ಮೆಟ್ರೋ ಬಗ್ಗೆ ಒಂದು ದಿನವೂ ತಲೆ ಕೆಡಿಸಿಕೊಂಡಿಲ್ಲ ಎಂದು ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.