ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿರುವ ಸೌಜನ್ಯ ಮನೆಗೆ ಭೇಟಿ ನೀಡಿದ ಬೆನ್ನಿಗೇ ತನಗೆ ಸಾಮಾಜಿಕ ಜಾಲತಾಣಗಳಲ್ಲಿ ಜೀವಬೆದರಿಕೆ ಬಂದಿದೆ ಎಂದು ಮಾಜಿ ಬಿಗ್ಬಾಸ್ ಸ್ಪರ್ಧಿ ರಜತ್ ಆರೋಪಿಸಿದ್ದಾರೆ.
ಈ ಬಗ್ಗೆ ಅವರು ಡಿಜಿಐಜಿಪಿ ಅವರಿಗೆ ದೂರು ನೀಡಿದ್ದು, ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಪತ್ನಿಗೆ ಬೆದರಿಕೆ ಸಂದೇಶ ಬಂದಿತ್ತು. ಇದೊಂದು ಕೆಟ್ಟ ಬೆಳವಣಿಗೆಯಾಗಿದೆ. ಹಾಗಾಗಿ ಪೊಲೀಸ್ ಇಲಾಖೆಗೆ ದೂರು ನೀಡಿದ್ದೇನೆ ಎಂದು ಹೇಳಿದ್ದಾರೆ.
ಬುಧವಾರ ಹಾಡಹಗಲೇ ನಮ್ಮ ಕಣ್ಣ ಮುಂದೆ ಎಲ್ಲಾ ನಡೆದಿದೆ. ಹಲ್ಲೆ ಮಾಡಿದವರ ಮೇಲೆ ದೂರು ಕೊಟ್ಟಿದ್ದೇನೆ. ನನ್ನ ಪತ್ನಿಗೆ ಬೆದರಿಕೆ ಸಂದೇಶ ಹಾಕಿದವರ ವಿರುದ್ದವೂ ದೂರು ಕೊಟ್ಟಿದ್ದೇವೆ. ದೂರು ಸೈಬರ್ ಠಾಣೆಗೆ ವರ್ಗಾವಣೆ ಆಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.