ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ಹೃತಿಕ್ ರೋಷನ್ ಅವರು ಎಂಥ ಅದ್ಭುತ ಡ್ಯಾನ್ಸರ್ ಎಂಬುದು ಎಲ್ಲರಿಗೂ ಗೊತ್ತು. ಅದೇ ರೀತಿ, ಜೂನಿಯರ್ ಎನ್ಟಿಆರ್ ಕೂಡ ಡ್ಯಾನ್ಸ್ ವಿಚಾರದಲ್ಲಿ ಯಾರಿಗೂ ಕಡಿಮೆ ಇಲ್ಲ. ‘ವಾರ್ 2’ ಸಿನಿಮಾದಲ್ಲಿ ಜೂನಿಯರ್ ಎನ್ಟಿಆರ್ ಮತ್ತು ಹೃತಿಕ್ ರೋಷನ್ ಅವರು ತೆರೆ ಹಂಚಿಕೊಂಡಿದ್ದಾರೆ. ಅವರಿಬ್ಬರು ಒಟ್ಟಿಗೆ ಡ್ಯಾನ್ಸ್ ಮಾಡಿರುವ ‘ಜನಾಬ್-ಏ-ಆಲಿ’ ಹಾಡಿನ ಪ್ರೋಮೋ ಬಿಡುಗಡೆ ಆಗಿದೆ.
ಇದರಲ್ಲಿ ಹೃತಿಕ್ ರೋಷನ್ ಮತ್ತು ಜೂನಿಯರ್ ಎನ್ಟಿಆರ್ ಅವರ ಡ್ಯಾನ್ಸ್ ನೋಡಿ ಅಭಿಮಾನಿಗಳು ಫುಲ್ ಫಿಧಾ ಆಗಿದ್ದಾರೆ.
ಹಲವು ಕಾರಣಗಳಿಂದಾಗಿ ‘ವಾರ್ 2’ ಸಿನಿಮಾ ನಿರೀಕ್ಷೆ ಹುಟ್ಟುಹಾಕಿದೆ. ಈ ಚಿತ್ರಕ್ಕೆ ಅಯಾನ್ ಮುಖರ್ಜಿ ಅವರು ನಿರ್ದೇಶನ ಮಾಡಿದ್ದಾರೆ. ‘ಯಶ್ ರಾಜ್ ಫಿಲ್ಮ್ಸ್’ ಸಂಸ್ಥೆ ಮೂಲಕ ಅದ್ದೂರಿಯಾಗಿ ಈ ಚಿತ್ರ ನಿರ್ಮಾಣ ಆಗಿದೆ. ‘ಜನಾಬ್-ಏ-ಆಲಿ’ ಹಾಡಿನ ತುಣುಕು ಕೂಡ ಸಖತ್ ರಿಚ್ ಆಗಿ ಮೂಡಿಬಂದಿದೆ.