ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಮೂನ್ಸುಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.