ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಹಪಾಠಿಗಳು ರ‍್ಯಾಗಿಂಗ್ ಮಾಡಿದ್ದಕ್ಕೆ ಮನನೊಂದು ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದಲ್ಲಿ ನಡೆದಿದೆ.
ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿ ಅಂಜಲಿ ಮುಂಡಾಸ (21) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಶುಕ್ರವಾರ ಕಾಲೇಜಿನಲ್ಲಿ ಸಹಪಾಠಿಗಳು ಅಂಜಲಿಗೆ ರ‍್ಯಾಗಿಂಗ್ ಮಾಡಿದ್ದರು. ಇದರಿಂದ ಮಾನಸಿಕ ಕಿರುಕುಳ ಅನುಭವಿಸಿದ್ದ ಅಂಜಲಿ, ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ. ಈ ಸಂಬಂಧ ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.