ಜಾರ್ಖಂಡ್‌ ನಲ್ಲಿ ಹಳಿತಪ್ಪಿದ ಎರಡು ಗೂಡ್ಸ್ ರೈಲು: ಸಂಚಾರದಲ್ಲಿ ವ್ಯತ್ಯಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಾರ್ಖಂಡ್‌ನ ಸೆರೈಕೆಲಾ-ಖಾರ್ಸ್ವಾನ್ ಜಿಲ್ಲೆಯ ಚಾಂಡಿಲ್ ನಿಲ್ದಾಣದ ಬಳಿ ಎರಡು ಗೂಡ್ಸ್ ರೈಲುಗಳ 20ಕ್ಕೂ ಹೆಚ್ಚು ಬೋಗಿಗಳು ಹಳಿತಪ್ಪಿದ್ದು, ಆಗ್ನೇಯ ರೈಲ್ವೆಯ ಚಾಂಡಿಲ್-ಟಾಟಾನಗರ ವಿಭಾಗದ ನಡುವಿನ ರೈಲು ಸೇವೆಯ ಮೇಲೆ ಪರಿಣಾಮ ಬೀರಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಘಟನೆಯಲ್ಲಿ ಯಾರಿಗೂ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ರೈಲು ಹಳಿತಪ್ಪಿದ ಪರಿಣಾಮ ಚಾಂಡಿಲ್‌ನಿಂದ ಹೊರಡುವ ಮತ್ತು ಆಗಮಿಸುವ ರೈಲು ಸೇವೆಗಳಲ್ಲಿ ವ್ಯತ್ಯಯವಾಗಿದೆ ಎಂದು ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ(ಆದ್ರಾ ವಿಭಾಗ) ವಿಕಾಶ್ ಕುಮಾರ್ ಅವರು ತಿಳಿಸಿದ್ದಾರೆ.

ಪಾಟ್ನಾ-ಟಾಟಾನಗರ ವಂದೇ ಭಾರತ್ ಎಕ್ಸ್‌ಪ್ರೆಸ್, ಟಾಟಾ-ಕತಿಹಾರ್ ಎಕ್ಸ್‌ಪ್ರೆಸ್, ಟಾಟಾ-ಆರಾ ಎಕ್ಸ್‌ಪ್ರೆಸ್ ರೈಲು ರದ್ದಾಗಿವೆ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!