RCB, KSCAಗೆ ಶಾಕ್​: ಹೈಕೋರ್ಟ್​ ಮೆಟ್ಟಿಲೇರಿದ ಕಬ್ಬನ್​ ಪಾರ್ಕ್ ಅಸೋಸಿಯೇಷನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಅಭಿನಂದನಾ ಸಮಾರಂಭದಲ್ಲಿ ಕಾಲ್ತುಳಿತದಿಂದ 11 ಜನ ಸಾವನ್ನಪ್ಪಿದ್ದರು. ಇದೀಗ ಕೆಎಸ್‌ಸಿಎ ಹಾಗೂ ಆರ್‌ಸಿಬಿಗೆ ಕಬ್ಬನ್ ಪಾರ್ಕ್ ಅಸೋಸಿಯೇಷನ್ ಶಾಕ್ ನೀಡಿದೆ.

RCB ಆಟಗಾರರನ್ನು ವಿಧಾನಸೌಧದ ಗ್ರ್ಯಾಂಡ್​ ಸ್ಟೆಪ್ಸ್​ನಲ್ಲಿ ಸರ್ಕಾರ ಸನ್ಮಾನಿಸಿತ್ತು. ಆರ್​​ಸಿಬಿ ಆಟಗಾರರನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಕಿಕ್ಕಿರಿದು ಸೇರಿದ್ದರು. ಅಭಿಮಾನಿಗಳು ವಿಧಾನಸೌಧದ ಪಕ್ಕದಲ್ಲಿ ಇದ್ದ ಕಬ್ಬನ್ ಪಾರ್ಕ್​ನಲ್ಲಿನ ಮರಗಳ ಮೇಲೆ ಹತ್ತಿ ಆಟಗಾರರನ್ನು ನೋಡಲು ಮುಂದಾದರು. ಈ ವೇಳೆ ಅಭಿಮಾನಿಗಳ ಕಾಲ್ತುತುಳಿತದಿಂದ ಸಾಕಷ್ಟು ಸಸಿಗಳು ಹಾಳಾಗಿವೆ. ಇದರಿಂದ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ ಎಂದು ಕಬ್ಬನ್ ಪಾರ್ಕ್ ಅಸೋಸಿಯೇಷನ್ ಆರೋಪಿಸಿ, ಕೋರ್ಟ್​ ಮೆಟ್ಟಿಲು ಏರಿದೆ.

ಕಬ್ಬನ್ ಪಾರ್ಕ್‌ನಲ್ಲಿದ್ದ ಸಸಿಗಳು, ಮರಗಳಿಗೆ ಮತ್ತು ಉದ್ಯಾನವನಕ್ಕೆ ಹಾನಿಯಾಗಿದೆ. ವಿಧಾನಸೌಧದ ಮುಂಭಾಗದ ಗಾರ್ಡನ್​​ನಲ್ಲೂ ಹಾನಿಯಾಗಿದೆ. ತೋಟಗಾರಿಕೆ ಇಲಾಖೆ ಕಬ್ಬನ್ ಪಾರ್ಕ್​ನಲ್ಲಿ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಲಾನ್ ಅಳವಡಿಸಿತ್ತು. ಈ ಲಾನ್​ಗು ಕೂಡ ಕಾಲ್ತುತುಳಿತದಲ್ಲಿ ಹಾನಿಯಾಗಿದೆ.

ಇದೀಗ, ಕಾಲ್ತುತುಳಿತದಲ್ಲಿ ಪಾರ್ಕ್​ಗೆ ಹಾನಿಯಾಗಿದ್ದು, ಈ ನಷ್ಟವನ್ನು ಆರ್​ಸಿಬಿ ಹಾಗೂ ಕೆಎಸ್​ಸಿಎ ಭರಿಸಿಕೊಡಬೇಕು ಅಂತ ಕಬ್ಬನ್​ ಪಾರ್ಕ್ ಅಸೋಸಿಯೇಷನ್ ಹೈಕೋರ್ಟ್​ನಲ್ಲಿ ಪಿಐಎಲ್ ಸಲ್ಲಿಸಿದೆ.

ಕಾಲ್ತುತುಳಿತದಲ್ಲಿ ಉಂಟಾದ ಸಂಪೂರ್ಣ ನಷ್ಟ ಭರಿಸುವಂತೆ ಕಬ್ಬನ್​ ಪಾರ್ಕ್ ಅಸೋಸಿಯೇಷನ್ ಕೋರ್ಟ್ ಮೊರೆ ಹೋಗಿ ಒತ್ತಾಯ ಮಾಡಿದ್ದು, ಆರ್​ಸಿಬಿ ಹಾಗೂ ಕೆಎಸ್​ಸಿಎಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!