ಕೇಂದ್ರ ಸರಕಾರದ ವಿರುದ್ಧ ಸಮರ: ನಾಳೆ ಮತ್ತೆ ಇಂಡಿಯಾ ಬಣದ ಸಂಸದರಿಗೆ ಭೋಜನಕೂಟ ಆಯೋಜಿಸಿರುವ ಖರ್ಗೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಮತ್ತು ಚುನಾವಣಾ ಅಕ್ರಮ ಆರೋಪದ ವಿರುದ್ಧ ವಿರೋಧ ಪಕ್ಷಗಳು ಸಂಘಟಿತ ಹೋರಾಟ ನಡೆಸುತ್ತಿರುವ ನಡುವೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ಇಂಡಿಯಾ ಬಣದ ಸಂಸದರಿಗೆ ಭೋಜನಕೂಟ ಆಯೋಜಿಸಿದ್ದಾರೆ.

ಮತಗಳ್ಳತನ ವಿಷಯದ ಕುರಿತು ವಿರೋಧ ಪಕ್ಷದ ನಾಯಕರು ಮತ್ತು ಸಂಸದರು ಸೋಮವಾರ ಸಂಸತ್ತಿನಿಂದ ಚುನಾವಣಾ ಆಯೋಗದ ಕಚೇರಿಗೆ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲಿದ್ದಾರೆ.
ಅದೇ ದಿನ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಖರ್ಗೆ ಅವರು ಚಾಣಕ್ಯಪುರಿಯಲ್ಲಿರುವ ಹೋಟೆಲ್ ತಾಜ್ ಪ್ಯಾಲೇಸ್ ನಲ್ಲಿ ಇಂಡಿಯಾ ಬಣದ ಸಂಸದರಿಗೆ ಆತಿಥ್ಯ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಿವಾಸದಲ್ಲಿ ಇತ್ತೀಚಿಗೆ ಡಿನ್ನರ್ ಪಾರ್ಟಿ ನಡೆದಿತ್ತು. ಅದರಲ್ಲಿ ಪಾಲ್ಗೊಂಡಿದ್ದ ಇಂಡಿಯಾ ಬಣದ ನಾಯಕರು ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ವಿರುದ್ಧ ಒಗ್ಗಡಿನ ಹೋರಾಟಕ್ಕೆ ಪಣ ತೊಟ್ಟಿದ್ದರು. ಇದಾದ ಕೆಲವೇ ದಿನಗಳಲ್ಲಿ ಇದೀಗ ಖರ್ಗೆ ಅವರು ಭೋಜನ ಕೂಟ ಆಯೋಜಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!