ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಭಿಮಾನ್ ಸ್ಟೂಡಿಯೋ ಜಾಗದಲ್ಲಿದ್ದ ಸಾಹಸಸಿಂಹ ವಿಷ್ಣುವರ್ಧನ್ ಅವರ ಸಮಾಧಿಯನ್ನು ನೆಲಸಮ ಮಾಡಿದ್ದಕ್ಕೆ ಕಿಚ್ಚ ಸುದೀಪ್, ವಿಜಯರಾಘವೇಂದ್ರ, ವಸಿಷ್ಠ ಸಿಂಹ ಸೇರಿದಂತೆ ಕೆಲವು ನಟರು ಹಾಗೂ ನಟಿಯರಾದ ಸುಧಾರಾಣಿ, ಶ್ರುತಿ ಬೇಸರ ವ್ಯಕ್ತಪಡಿಸಿದ್ದಾರೆ.
ನಟ ವಿಷ್ಣು ಅಭಿಮಾನಿಗಳಂತೂ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದೀಗ ನಟ, ರಿಯಲ್ ಸ್ಟಾರ್ ಉಪೇಂದ್ರ ಕೂಡ ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ.
ಬಸವಣ್ಣವರ ವಚನದ ಸಾಲಿನ ಮೂಲಕ ‘ವಿಷ್ಣು ಅಮರರು’ ಎಂದಿದ್ದಾರೆ. “ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ”. ‘ಕೋಟಿಗೊಬ್ಬ ಸಾಹಸಸಿಂಹ ಡಾ.ವಿಷ್ಣು ಸರ್ ನನ್ನಂತ ಕೋಟಿ ಕೋಟಿ ಅಭಿಮಾನಿಗಳ ಹೃದಯದಲ್ಲಿ ಎಂದೆಂದಿಗೂ ಶಾಶ್ವತ’ ಎಂದು ನಟ ಉಪೇಂದ್ರ ಬರೆದು ಪೋಸ್ಟ್ ಮಾಡಿದ್ದಾರೆ. ಈ ಮೂಲಕ ನಟ ವಿಷ್ಣುವರ್ಧನ್ ಸಮಾಧಿ ತೆರವಿಗೆ ಬೇಸರವನ್ನು ಹೊರಹಾಕಿದ್ದಾರೆ.