ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದಿನಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದೆ. ಇಂದಿನಿಂದ ಆಗಸ್ಟ್ 22 ರವರೆಗೂ ಅಧಿವೇಶನ ನಡೆಯಲಿದೆ.
ಸರ್ಕಾರದ ವೈಫಲ್ಯಗಳನ್ನ ಬಿಚ್ಚಿಟ್ಟು ಸರ್ಕಾರವನ್ನ ಎಕ್ಸ್‌ಪೋಸ್ ಮಾಡಲು ವಿಪಕ್ಷಗಳು ಸಿದ್ಧತೆ ನಡೆಸಿವೆ.
ಭಾನುವಾರ ಬಿಜೆಪಿ-ಜೆಡಿಎಸ್ ಪ್ರಮುಖ ನಾಯಕರಿಂದ ಸದನದಲ್ಲಿ ಹೋರಾಟದ ಬಗ್ಗೆ ಚರ್ಚೆಯ ವಿಷಯಗಳ ಪ್ರಸ್ತಾಪವಾಗಿದೆ. ವಿಪಕ್ಷಗಳ ಅಸ್ತ್ರಕ್ಕೆ ಪ್ರತಿ ಅಸ್ತ್ರ ಹೂಡಲು ಸರ್ಕಾರದಿಂದಲೂ ಸಿದ್ಧತೆ ನಡೆದಿದೆ.