ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಬಾಗಲೂರಿನ ಗುಂಡಪ್ಪ ಕ್ರಾಸ್ ಬಳಿ ಸೇಮೆಂಟ್ ಮಿಕ್ಸರ್ ಲಾರಿ ಡಿಕ್ಕಿಯಿಂದ ಸ್ಕೂಟಿಯಲ್ಲಿ ತೆರಳುತ್ತಿದ್ದ ಗರ್ಭಿಣಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೂದಿಗೆರೆಯ ವಿರಗ ನಗರ ನಿವಾಸಿ ಮಾನಸ ಮೃತ ಗರ್ಭಿಣಿ .
ಹಿಂಬದಿಯಿಂದ ಡಿಕ್ಕಿ ಹೊಡೆದು ಗರ್ಭಿಣಿ ಮೇಲೆ ಲಾರಿ ಹರಿದಿದ್ದು, ಸ್ಥಳದಲ್ಲಿಯೇ ಸಾವನಪ್ಪಿದ್ದಾಳೆ.
ಪೊಲೀಸರು ಸದ್ಯ ಸಿಮೆಂಟ್ ಮಿಕ್ಸರ್ ಲಾರಿ ಚಾಲಕನನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



