ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಚಿವ ಸ್ಥಾನಕ್ಕೆ ಸಹಕಾರಿ ಸಚಿವ ರಾಜಣ್ಣ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆಯ ಬೆನ್ನಲ್ಲೇ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಮತದಾರರ ಪಟ್ಟಿ ಸಿದ್ಧಪಡಿಸಲಾಗಿದೆ. ಆಗ ಎಲ್ಲರು ಕಣ್ಣುಮುಚ್ಚಿ ಕುಳಿತಿದ್ದರೇ ಎಂದು ರಾಜಣ್ಣ ಪ್ರಶ್ನಿಸಿದ್ದರು. ರಾಜಣ್ಣ ಅವರ ಈ ಹೇಳಿಕೆ ಕಾಂಗ್ರೆಸ್‌ಗೆ ಮುಜುಗರ ತಂದಿತ್ತು. ಈ ಹೇಳಿಕೆಯ ನಂತರ ಹೈಕಮಾಂಡ್ ರಾಜಣ್ಣಗೆ ರಾಜೀನಾಮೆ ಸಲ್ಲಿಸಲು ಸೂಚನೆ ನೀಡಿತ್ತು.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಸಿಎಂಗೆ ಕರೆ ಮಾಡಿ ರಾಜೀನಾಮೆ ಪಡೆಯುವಂತೆ ಸೂಚನೆ ನೀಡಿದ ಬೆನ್ನಲ್ಲೇ ಇದೀಗ ಕೆಎನ್ ರಾಜಣ್ಣ ಅವರ ಪುತ್ರ ರಾಜೇಂದ್ರ ಅವರು ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯಗೆ ನೀಡಿದ್ದಾರೆ.
ರಾಜೀನಾಮೆ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ರಾಜಣ್ಣ, ಸಿಎಂ ಜೊತೆ ಚರ್ಚೆ ಮಾಡುತ್ತೇನೆ. ಅಲ್ಲಿಯವರೆಗೂ ನಾನು ಮಾತನಾಡುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.