ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಉಗ್ರರ ಅಡುಗುತಾಣಗಳನ್ನಾಗಿ ಬಳಸಿಕೊಂಡಿದ್ದಾರೆ ಎಂದು ಶಂಕಿಸಲಾದ ಗುಹೆಗಳನ್ನು ಭಾರತೀಯ ಸೇನೆ ಸ್ಫೋಟಿಸಿದೆ.
ಕಿಶ್ತ್ವಾರ್ ಜಿಲ್ಲೆಯ ಪರ್ವತ ಪ್ರದೇಶದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಯುತ್ತಿದೆ. ಕಾರ್ಯಾಚರಣೆ ವೇಳೆ, ಭಾರೀ ಗುಂಡಿನ ದಾಳಿ ಮತ್ತು ಸ್ಫೋಟಗಳು ಸಂಭವಿಸಿವೆ.
ಪರ್ವತಗಳಲ್ಲಿ ಇರುವ ಉಗ್ರರ ಅಡಗು ತಾಣಗಳಾಗಿ ಬಳಸಿಕೊಳ್ಳುತ್ತಿದ್ದರು ಎಂದು ಶಂಕಿಸಲಾದ ನೈಸರ್ಗಿಕ ಗುಹೆಯನ್ನು ಸ್ಫೋಟಿಸಲಾಯಿತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾರ್ಯಾಚರಣೆಯಲ್ಲಿ ಉಗ್ರರು ಸಾವನ್ನಪ್ಪಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.