ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಹುಲ್ ಗಾಂಧಿ ನಿರ್ದೇಶನದ ಮೇಲೆ ರಾಜಣ್ಣರನ್ನ ಸಂಪುಟದಿಂದ ಕೈ ಬಿಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ರಾಜಣ್ಣರನ್ನ ಸಚಿವ ಸಂಪುಟದಿಂದ ವಜಾ ಮಾಡಬೇಕಾದ ಪರಿಸ್ಥಿತಿ ನಿರ್ಮಾಣ ಆಯ್ತು. ಅವರು ಮಾತನಾಡಿದ ಉದ್ದೇಶ ಬೇರೆಯೇ ಆಗಿದ್ದರೂ ಹೇಳಿದ ರೀತಿ ಸರಿ ಇರಲಿಲ್ಲ. ಆ ತಪ್ಪಿನಿಂದಾಗಿ ರಾಜಣ್ಣರನ್ನ ಸಂಪುಟದಿಂದ ಕೈ ಬಿಡಬೇಕಾಯಿತು. ರಾಹುಲ್ ಗಾಂಧಿ ಅವರ ನಿರ್ದೇಶನದ ಮೇಲೆ ರಾಜಣ್ಣರನ್ನ ಸಂಪುಟದಿಂದ ಕೈಬಿಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.