ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಸೇರಿ ಇತರ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ರದ್ದಾಗುತ್ತಾ ಅಥವಾ ಮುಂದುವರೆಯುತ್ತಾ ಎಂಬುದು ನಾಳೆ ತೀರ್ಮಾನವಾಗಲಿದೆ.
ಜುಲೈ 24 ರಂದು ನಡೆದ ಕೊನೆಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ಪೀಠ ನಿಮ್ಮ ವಾದ-ಪ್ರತಿವಾದವನ್ನು ಮೂರು ಪುಟಗಳಲ್ಲಿ ಸಂಕ್ಷಿಪ್ತವಾಗಿ ಒಂದು ವಾರದಲ್ಲಿ ತಿಳಿಸಿ ಎಂದು ಸೂಚಿಸಿದ್ದರು. ಅದರಂತೆ ಪವಿತ್ರಾ ಗೌಡ, ದರ್ಶನ್ ಮತ್ತು ಬೆಂಗಳೂರು ಪೊಲೀಸರ ಪರ ವಕೀಲರು ಲಿಖಿತ ರೂಪದಲ್ಲಿ ವಾದವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ನಾಳೆ ವಿಚಾರಣೆ ನಡೆಯಲಿದ್ದು, ನಟ ದರ್ಶನ್ ಭವಿಷ್ಯ ನಿರ್ಧಾರವಾಗಲಿದೆ. ಜಾಮೀನು ರದ್ದಾಗುತ್ತಾ ಅಥವಾ ಮುಂದುವರೆಯುತ್ತಾ ಎಂಬುದು ಕಾದು ನೋಡಬೇಕಿದೆ.