ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿಯಲ್ಲಿ ನಡೆದ ಪಾರ್ಟಿಯಲ್ಲಿ 24 ವರ್ಷದ ಮಹಿಳೆಯೊಬ್ಬರಿಗೆ ಮಾದಕ ದ್ರವ್ಯ ಸೇವಿಸುವಂತೆ ಮಾಡಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ಬುಧವಾರ ತಿಳಿಸಿವೆ.
ಸಂತ್ರಸ್ತೆ ನೀಡಿರುವ ದೂರಿನ ಮೇರೆಗೆ ಸೋಮವಾರ ಎಫ್‌ಐಆರ್ ದಾಖಲಿಸಲಾಗಿದೆ. ಪಂಜಾಬಿ ಬಾಗ್ ನಿವಾಸಿಯಾಗಿರುವ ಸಂತ್ರಸ್ತೆ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಭಾನುವಾರ ತನ್ನ ಸ್ನೇಹಿತೆ ಮತ್ತೊಬ್ಬ ಸ್ನೇಹಿತನ ಮನೆಯಲ್ಲಿ ನಡೆಯುವ ಪಾರ್ಟಿಗೆ ಆಹ್ವಾನಿಸಿದ್ದರು ಎಂದು ಆರೋಪಿಸಿದ್ದಾರೆ.
ದೂರಿನ ಪ್ರಕಾರ, ಗುಂಪು ತಡರಾತ್ರಿಯವರೆಗೆ ಮದ್ಯ ಸೇವಿಸಿತ್ತು. ನಂತರ ಮಹಿಳೆಗೆ ಮಾದಕ ದ್ರವ್ಯ ಬೆರೆಸಿದ ಮದ್ಯವನ್ನು ನೀಡಲಾಗಿದ್ದು, ಆಕೆ ಅರೆ ಪ್ರಜ್ಞಾಹೀನಳಾಗಿದ್ದಾಳೆ. ಬಳಿಕ ಅತ್ಯಾಚಾರ ಎಸಗಲಾಗಿದೆ.
ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದ್ದು, ಈ ಘಟನೆಯನ್ನು ಯಾರಿಗಾದರೂ ಬಹಿರಂಗಪಡಿಸಿದರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಆರೋಪಿಗಳು ಬೆದರಿಕೆ ಹಾಕಿದ್ದಾಗಿ ತಿಳಿಸಿದ್ದಾರೆ.
ಪೊಲೀಸರು ಮಹಿಳೆಯ ಹೇಳಿಕೆಯನ್ನು ದಾಖಲಿಸಿಕೊಂಡು, ಈ ವಿಷಯದ ಬಗ್ಗೆ ಹೆಚ್ಚಿನ ತನಿಖೆ ಆರಂಭಿಸಿದ್ದಾರೆ.