ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ಸ್ಟಾಗ್ರಾಮ್ನಲ್ಲಿ 1.2 ಮಿಲಿಯನ್ಗಿಂತಲೂ ಹೆಚ್ಚು ಫಾಲೋವರ್ಗಳನ್ನು ಹೊಂದಿರುವ ಸಾಮಾಜಿಕ ಜಾಲತಾಣ ಪ್ರಭಾವಿಯನ್ನು 40 ಕೋಟಿ ರೂ. ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಬಂಧಿಸಿದೆ.
ಸಂದೀಪಾ ವಿರ್ಕ್ ಬಂಧಿತ ವ್ಯಕ್ತಿಯಾಗಿದ್ದು, ಬಯೋಗ್ರಾಮ್ನಲ್ಲಿ ಅವರು ನಟಿ ಎಂದು ನಮೂದಿಸಲಾಗಿತ್ತು. ಈಕೆಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 406 (ನಂಬಿಕೆ ಉಲ್ಲಂಘನೆ) ಮತ್ತು 420 (ವಂಚನೆ) ಅಡಿಯಲ್ಲಿ ಮೊಹಾಲಿಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸಂದೀಪಾ ವಿರ್ಕ್ ವಿರುದ್ಧ ಸುಳ್ಳು ನೆಪಗಳ ಅಡಿಯಲ್ಲಿ ಮತ್ತು ತಪ್ಪು ನಿರೂಪಣೆಯ ಮೂಲಕ ಹಣವನ್ನು ಕೇಳುವ ಮೂಲಕ ವ್ಯಕ್ತಿಗಳನ್ನು ವಂಚಿಸಿದ ಆರೋಪ ಹೊರಿಸಲಾಗಿದೆ.
2002ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಮಂಗಳವಾರ ಮತ್ತು ಬುಧವಾರ ದೆಹಲಿ ಮತ್ತು ಮುಂಬೈನ ಅನೇಕ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಿತು.