ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನ್ ಆಪ್ತ ಪ್ರದೂಷ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ಸ್‌ಪೆಕ್ಟರ್ ಸುಬ್ರಮಣ್ಯ ಮತ್ತು ತಂಡ ಆತನನ್ನು ಬಂಧಿಸಿದೆ.
ಕೊಲೆ ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಗುರುವಾರ ಬೆಳಗ್ಗೆ ಮಹತ್ವದ ತೀರ್ಪು ನೀಡಿತ್ತು.
ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಈ ಆದೇಶದ ಬೆನ್ನಲ್ಲೇ ಪ್ರದೂಷ್‌ನನ್ನು ಪೊಲೀಸರು ಬಂಧಿಸಿದ್ದಾರೆ.