ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೂವರು ಮಕ್ಕಳು ಸೇರಿದಂತೆ 10 ಮಂದಿ ಬಾಂಗ್ಲಾದೇಶ ಪ್ರಜೆಗಳನ್ನು ಶ್ರೀನಿವಾಸಪುರ ಪಟ್ಟಣ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರು ಬಾಂಗ್ಲಾದೇಶ ಪ್ರಜೆಗಳು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಅನುಮಾನಗೊಂಡ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಮಾಹಿತಿ ಆಧಾರಿಸಿದ ಪೊಲೀಸರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಂದಗುಡಿ ಬಳಿ ನಾಲ್ವರು ಪುರುಷರು, ಮೂವರು ಮಹಿಳೆಯರು ಹಾಗೂ ಮೂವರು ಮಕ್ಕಳು ಸೇರಿದಂತೆ 10 ಮಂದಿ ಬ್ಲಾಂಗಾದೇಶ ಪ್ರಜೆಗಳನ್ನು ವಶಕ್ಕೆ ಪಡೆದಿದ್ದಾರೆ.