ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತೆ ಜೈಲುಪಾಲಾದ ಬಗ್ಗೆ ಹಿರಿಯ ನಟಿ ಉಮಾಶ್ರೀ ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್ ವ್ಯಾಪಾರ ಜಗತ್ತಿನಲ್ಲಿ ಒಳ್ಳೆಯ ಕೊಡುಗೆ ಕೊಟ್ಟಿದ್ದಾರೆ. ಅವರ ಬಂಧನ ಚಿತ್ರರಂಗಕ್ಕೆ ದೊಡ್ಡ ನಷ್ಟ ಎಂದು ಹೇಳಿಕೆ ನೀಡಿದ್ದಾರೆ.
ಸುಪ್ರೀಂ ಕೋರ್ಟ್‌ನ ಬೆಳವಣಿಗೆಯನ್ನು ಪ್ರತಿಯೊಬ್ಬ ನಾಗರಿಕರು ಗೌರವಿಸಬೇಕು. ನಮಗು ಕೂಡ ಅದು ಅನಿವಾರ್ಯ. ನಾನು ಅವತ್ತು ಕೂಡ ಹೇಳಿದ್ದೆ, ಇವತ್ತೂ ಹೇಳುತ್ತೇನೆ. ನಾವು ಕಲಾವಿದರು, ಸಮಾಜದ ಸ್ವತ್ತು. ನಮ್ಮನ್ನ ಗಮನಿಸುತ್ತಿರುತ್ತಾರೆ. ಹಾಗಾಗಿ, ನಮ್ಮ ಪ್ರತಿಯೊಂದು ಮಾತು, ಕೃತಿ ಚೌಕಟ್ಟಿನಲ್ಲಿ ಇರುವುದನ್ನ ನಿರೀಕ್ಷೆ ಮಾಡುತ್ತಾರೆ ಎಂದು ತಿಳಿಸಿದ್ದಾರೆ.