ಧರ್ಮಸ್ಥಳ ವಿಚಾರದಲ್ಲಿ ಸರ್ಕಾರ ಸತ್ಯಾಂಶ ಬಹಿರಂಗಗೊಳಿಸಲಿ: ಬೊಮ್ಮಾಯಿ

ಹೊಸದಿಗಂತ ವರದಿ ಹಾವೇರಿ:

ಧರ್ಮಸ್ಥಳ ಪ್ರಕರಣದಲ್ಲಿ ಡಿಕೆಶಿ ಏನು ಹೇಳಿದ್ದಾರೆ ಗೊತ್ತಿಲ್ಲ. ಆದರೆ ಆ ಪ್ರಕರಣದಲ್ಲಿ ಏನೇನು ಆಗಿದೆ ಅದನ್ನು ಬಹಿರಂಗ ಪಡಿಸಲಿ. ತನಿಖೆಯಲ್ಲಿ ಇತ್ತೀಚೆಗೆ ಏನು ಗೊತ್ತಾಗಿದೆ? ಎಂಬುದನ್ನು ತಿಳಿಸಲಿ. ಮುಚ್ಚಿಟ್ಟುಕೊಳ್ಳೋದು ಸರಿ ಅಲ್ಲ. ಸತ್ಯ ಜನರಿಗೆ ತಿಳಿಯಲಿ ಅನ್ನೋದೇ ನಮ್ಮ ಉದ್ದೇಶ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಧಾರ್ಮಿಕ ಕ್ಷೇತ್ರವನ್ನು ಇಷ್ಟು ಅವಹೇಳನಕಾರಿಯಾಗಿ ಅಪಪ್ರಚಾರ ಮಾಡಿರೋದು ಇತಿಹಾಸದಲ್ಲೇ ಇಲ್ಲ. ಸರ್ಕಾರ ಇದಕ್ಕೆಲ್ಲಾ ಅವಕಾಶ ಮಾಡಿ ಕೊಟ್ಟಿದೆ. ಹುಡುಗಾಟ ಆಗಿ ಬಿಟ್ಟಿದೆ. ನಾಳೆ ಇನ್ನೊಬ್ರು ಇನ್ನೊಂದು ಹೇಳ್ತಾರೆ. ಜವಾಬ್ದಾರಿಯುತ ಸರ್ಕಾರ ಕಾನೂನು ಪ್ರಕಾರ ನಡೆದುಕೊಂಡಿಲ್ಲ. ಯಾರನ್ನೋ ಓಲೈಸಲು ಈ ರೀತಿ ಮಾಡ್ತಿದಾರೆ ಅಂತ ಆರೋಪ ಇದೆ ಎಂದು ದೂರಿದರು.

ಇದರಿಂದ ಹೊರಬರಲು ಏನಾಯ್ತು? ಏನಿಲ್ಲ?
ಅನಾಮಿಕ ಮನುಷ್ಯ ಮುಸುಕುದಾರಿ ಯಾರು? ಏನು ಬಹಿರಂಗಪಡಿಸಲಿ. ಕೂಡಲೇ ಸರ್ಕಾರ ಈ ಕೆಲಸ ಮಾಡಲಿ. ಇಲ್ಲದಿದ್ದರೆ ಧಾರ್ಮಿಕ ಕ್ಷೇತ್ರದ ಅಪಪ್ರಚಾರಕ್ಕೆ ಸರ್ಕಾರವೇ ಕುಮ್ಮಕ್ಕು ಕೊಟ್ಟಿದೆ ಅಂತ ಪುರಾವೆ ಆಗುತ್ತೆ ಎಂದ ಅವರು, ನಾನು ಮಂಪರು ಪರೀಕ್ಷೆಗೆ ಸಿದ್ದನಿದ್ದೇನೆ ಅಂತ ಮುಸುಕುದಾರಿ ಮೊದಲೇ ಹೇಳಿದ್ದಾರೆ. ಅವನೇ ರೆಡಿ ಇದ್ದಾಗ ಮಂಪರು ಪರೀಕ್ಷೆ ಮಾಡೋಕೆ ಏನು ತೊಂದರೆ ಎಂದರು.

ಮಲ್ಲಿಕಾರ್ಜುನ ಖರ್ಗೆಯವರು ಕೇಂದ್ರ ಸರ್ಕಾರದ ವಿರುದ್ಧ ಹರ್ ಬೂತ್, ಮತ್ ಲೂಟ್ ಹೋರಾಟ ವಿಚಾರ ಕುರಿತಂತೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಯಾರು ಯಾರು ಲೂಟಿ ಮಾಡಿದ್ದಾರೆ ಸ್ಪಷ್ಟವಾಗಿದೆ. ಮೊದಲು ಸೋನಿಯಾ ಗಾಂದಿ ಈ ಬಗ್ಗೆ ಉತ್ತರ ಕೊಡಲಿ ಎಂದು ಚಾಟಿ ಬೀಸಿದರು.

ರಾಹುಲ್ ಗಾಂಧಿ ಬಿಜೆಪಿ ವಿರುದ್ದ ಮತಗಳವು ಆರೋಪಕ್ಕೆ ಪ್ರತಿಕ್ರಿಯಿಸಿ, ಕೆ.ಎನ್.ರಾಜಣ್ಣ ಸತ್ಯ ಹೇಳಿ ಮಂತ್ರಿ ಸ್ಥಾನ ಕಳೆದುಕೊಂಡಿದ್ದಾರೆ. ಕಾಂಗ್ರೆಸ್ ನಲ್ಲಿ ಸತ್ಯಕ್ಕೆ ಸ್ಥಳ ಇಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಸುಳ್ಳನ್ನು ನೂರ ಬಾರಿ ಹೇಳಿ ಸತ್ಯ ಅಂತ ಸಾಬೀತು ಮಾಡುವ ಅವರ ನಾಯಕ ರಾಹುಲ್ ಗಾಂಧಿ. ದ್ವಂದ್ವದಲ್ಲಿ ರಾಹುಲ್ ಗಾಂಧಿ ಸಿಕ್ಕಿ ಹಾಕಿಕೊಂಡಿದ್ದಾರೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!