ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿದ್ದು, ಮುಂದಿನ ನಾಲ್ಕು ದಿನ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಬೆಳಗಾವಿ, ವಿಜಯಪುರ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ವರದಿ ಮಾಡಿದೆ.