ಹೊಸದಿಗಂತ ಡಿಜಿಟಲ್ ಡೆಸ್ಕ್:
79ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣ ಬಳಿಕ ತೆರೆದ ಜೀಪ್ನಲ್ಲಿ ಪೆರೇಡ್ ವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕಾರ ಮಾಡಿದರು. ಈ ಸಮಾರಂಭದಲ್ಲಿ ರಾಜ್ಯ ಸಂಪುಟ ಸಚಿವರು, ರಾಜ್ಯದ ಶಾಸಕರು, ಅಧಿಕಾರಿಗಳು ಹಾಗೂ ಕೆಲವು ಸ್ವಾತಂತ್ರ್ಯ ಹೋರಾಟಗಾರರು ಭಾಗವಹಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮೈದಾನದಲ್ಲಿ ವ್ಯಾಪಕ ಬಿಗಿ ಬಂದೋಬಸ್ತ್ ಮಾಡಲಾಗಿದೆ.