ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಮಾಜಿಕ ಸಮಸ್ಯೆ ಹೋಗಲಾಡಿಸಲು ಹೊಸ ದಾರಿ ಹುಡುಕಿಕೊಳ್ಳಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದ ಮಾಣಿಕ್ ಷಾ ಮೈದಾನದಲ್ಲಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಈ ವೇಳೆ, ನಾವೆಲ್ಲರೂ ಗಮನಿಸಿರುವ ಹಾಗೆ ನಮ್ಮ ಹೊಸ ತಲೆಮಾರು ಮೊಬೈಲ್ ಫೋನ್, ಇಂಟರ್ನೆಟ್ ಮುಂತಾದವುಗಳ ಭರಾಟೆಯಲ್ಲಿ ವಿಪರೀತ ತಲ್ಲಣಗಳನ್ನು ಎದುರಿಸುತ್ತಿದೆ. ಖಿನ್ನತೆ, ಆತಂಕ, ವಿನಾಕಾರಣ ಸಿಟ್ಟು, ದ್ವೇಷ ಮುಂತಾದ ಭಾವನೆಗಳಲ್ಲಿ ಸಿಲುಕಿ ಸಂಕಷ್ಟ ಪಡುತ್ತಿದೆ. ಈ ಸಾಮಾಜಿಕ ಸಮಸ್ಯೆಯನ್ನು ಹೋಗಲಾಡಿಸಲು ನಾವೆಲ್ಲರೂ ಸೇರಿ ಹೊಸ ದಾರಿಗಳನ್ನು ಹುಡುಕಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ನಾವು ಮೊಬೈಲ್ ಬಿಡಿ ಪುಸ್ತಕ ಹಿಡಿ ಮತ್ತು ಓದು ಕರ್ನಾಟಕ ಎಂಬ ಕಾರ್ಯಕ್ರಮವನ್ನು ರೂಪಿಸಿದ್ದೇವೆ ಎಂದು ತಿಳಿಸಿದ್ದಾರೆ.