ಸಿಲಿಂಡರ್ ಸ್ಫೋಟ: ಓರ್ವ ಬಾಲಕ ಮೃತ್ಯು, 8 ಮಂದಿಗೆ ಗಾಯ, 10ಕ್ಕೂ ಹೆಚ್ಚು ಮನೆಗಳಿಗೆ ಹಾನಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಲಿಂಡರ್ ಸ್ಫೋಟಗೊಂಡು ಬಾಲಕ ಸಾವನ್ನಪ್ಪಿದ ಘಟನೆ ನಗರದ ಆಡುಗೊಡಿಯಲ್ಲಿ ನಡೆದಿದೆ. ಘಟನೆಯಲ್ಲಿ 8 ಜನ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭಿರವಾಗಿದೆ.

ಮೃತ ಬಾಲಕನನ್ನು ಮುಬಾರಕ್ (8) ಎಂದು ಗುರುತಿಸಲಾಗಿದೆ. ತಿಮ್ಮರಾಜು ಎಂಬುವವರ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ಆ ಮನೆ ಸಂಪೂರ್ಣ ಛಿದ್ರವಾಗಿದೆ. ಸ್ಫೋಟದಿಂದ ಅಕ್ಕಪಕ್ಕದ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.

ಗಾಯಾಳಯಗಳನ್ನು ಸಂಜಯ್ ಗಾಂಧಿ, ರಾಜೀವ್ ಗಾಂಧಿ ಆಸ್ಪತ್ರೆ ಸೇರಿದಂತೆ ಇತರೆ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!