ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿರಂತರ ಸುರಿದ ಮಳೆಯಿಂದ ಮನೆಯ ಮೇಲ್ಛಾವಣಿ ಕುಸಿದು ವೃದ್ಧ ದಂಪತಿ ಗಂಭೀರ ಗಾಯಗೊಂಡ ಘಟನೆ ದಾವಣಗೆರೆಯ ಮೆಹಬೂಬ್ ನಗರದಲ್ಲಿ ನಡೆದಿದೆ.
ಗಾಯಗೊಂಡವರನ್ನು ಶೇಕ್ ಬುಡೇನ್ ಸಾಬ್ (86), ನೂರ್ ಜಹಾನ್ (76) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ವೃದ್ಧರನ್ನು ರಕ್ಷಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಜಾದ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.