ಎತ್ತಿನಹೊಳೆ: ಮೊದಲು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳಿಗೇ ನೀರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಹು ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು ತುಂಬಿಸಲಾಗುವುದು ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್. ಸುರೇಶ ಕೋಲಾರದಲ್ಲಿಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಜಿಲ್ಲೆಯಲ್ಲಿ ಆರಂಭವಾಗುವ ಈ ಯೋಜನೆಯಡಿ ವಿವಿಧ ಜಿಲ್ಲೆಗಳ ಕೆರೆಗಳನ್ನು ತುಂಬಿಸಲು ನಿರ್ಧರಿಸಲಾಗಿತ್ತು. ಆದರೆ, ಕೊನೆಯ ಭಾಗದ ಈ ಮೂರು ಜಿಲ್ಲೆಗಳಿಗೆ ನೀರಿನ ಲಭ್ಯತೆ ಬಗ್ಗೆ ಇಲ್ಲಿನ ಜನಪ್ರತಿನಿಧಿಗಳು ಮತ್ತು ನಾನು ಆತಂಕ ವ್ಯಕ್ತಪಡಿಸಿದ್ದರು. ಈ ಭಾಗದ ಜನಪ್ರತಿನಿಧಿಗಳ ಮನವಿ ಮೇರೆಗೆ ಮುಖ್ಯಮಂತ್ರಿ, ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆರೆಗಳನ್ನು ತುಂಬಿಸುವ ನಿರ್ಧಾರ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!