ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯಂದು ರಾಷ್ಟ್ರಪತಿ ದ್ರೌಪದಿ ಮುರ್ಮು ರಾಷ್ಟ್ರ ರಾಜಧಾನಿಯಲ್ಲಿರುವ ಅವರ ಸ್ಮಾರಕ ‘ಸದೈವ್ ಅಟಲ್’ ನಲ್ಲಿ ಪುಷ್ಪ ನಮನ ಸಲ್ಲಿಸಿದರು.
ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಜ್ಯಸಭಾ ಉಪಸಭಾಪತಿ ಹರಿವಂಶ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ಇತರ ಹಿರಿಯ ನಾಯಕರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯಂದು ‘ಸದೈವ್ ಅಟಲ್’ ನಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದರು.