ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇನ್ನೂ ಕೆಲವರು ಮತ್ತೆ ಬಂಧನಕ್ಕೆ ಒಳಗಾಗಿದ್ದು ಪರಪ್ಪನ ಅಗ್ರಹಾರ ಜೈಲಿಗೆ ಸೇರಿದ್ದಾರೆ.
ಹೀಗೆ ನ್ಯಾಯಾಂಗ ಬಂಧನಕ್ಕೆ ಕಳಿಸುವ ಮುಂಚೆ ಎಲ್ಲ ಆರೋಪಿಗಳ ಚಿತ್ರಗಳು, ಬೆರಳಚ್ಚು ತೆಗೆದುಕೊಂಡು ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಕೊಂಡಿದ್ದರು.ಈ ವೇಳೆತೆಗೆದುಕೊಂಡಿದ್ದ ಕೆಲ ಆರೋಪಿಗಳ ಚಿತ್ರಗಳು ಇದೀಗ ವೈರಲ್ ಆಗಿವೆ.
ನಟ ದರ್ಶನ್, ಪವಿತ್ರಾ ಸೇರಿದಂತೆ ಒಟ್ಟು ಐದು ಮಂದಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಶರಣಾಗಿ ಅಲ್ಲಿಂದ ನ್ಯಾಯಾಂಗ ಬಂಧನಕ್ಕೆ ಹೋಗಿದ್ದರು. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಶರಣಾದ ಆರೋಪಿಗಳ ಚಿತ್ರಗಳನ್ನು ನಿಯಮದಂತೆ ಪೊಲೀಸರು ತೆಗೆದಿದ್ದರು.
ಜೈಲಿಗೆ ಹೋಗುವ ಮುನ್ನ ತೆಗೆದಿರುವ ಚಿತ್ರದಲ್ಲಿ ದರ್ಶನ್ ಲುಕ್ ಸಂಪೂರ್ಣವಾಗಿ ಬದಲಾಗಿದೆ. ದರ್ಶನ್ ತಲೆಗೂದಲು ಸಂಪೂರ್ಣವಾಗಿ ಬೋಳಿಸಿಕೊಂಡು ಬೋಳು ತಲೆ ಮಾಡಿಕೊಂಡಿದ್ದಾರೆ. ದರ್ಶನ್ ಅವರು ದೇವಾಲಯವೊಂದಕ್ಕೆ ಮುಡಿಕೊಟ್ಟಿದ್ದಾರೆ ಎನ್ನಲಾಗಿದೆ.
ಇನ್ನು ಪವಿತ್ರಾ ಗೌಡ ಅವರ ಫೋಟೊವನ್ನು ಸಹ ಕ್ಲಿಕ್ಕಿಸಲಾಗಿದ್ದು, ಇನ್ಸ್ಟಾಗ್ರಾಂ ಫೋಟೊ, ರೀಲ್ಸ್ಗಳ ರೀತಿ ಅಲ್ಲದೆ ಸಾಮಾನ್ಯವಾಗಿ ಫೋಟೊ ತೆಗೆಸಿಕೊಂಡಿದ್ದಾರೆ. ಈಗ ವೈರಲ್ ಆಗಿರುವ ಒಂದು ಫೋಟೊನಲ್ಲಿ ನಗುತ್ತಿದ್ದಾರೆ ಪವಿತ್ರಾ ಗೌಡ.