ದೆಹಲಿಗೆ ಬಂದಿಳಿದ ಗಗನಯಾತ್ರಿ ಶುಭಾಂಶು ಶುಕ್ಲಾ: ತಾಯ್ನಾಡಿನಲ್ಲಿ ಅದ್ಧೂರಿ ಸ್ವಾಗತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿ ಇತಿಹಾಸ ನಿರ್ಮಿಸಿದ ಗಗನಯಾತ್ರಿ ಶುಭಾಂಶು ಶುಕ್ಲಾ ತಮ್ಮ ತಾಯ್ನಾಡಿಗೆ ಮರಳಿದ್ದಾರೆ. ಅಮೆರಿಕದಿಂದ ವಿಶೇಷ ವಿಮಾನದಲ್ಲಿ ಪ್ರಯಾಣಿಸಿ ಮಧ್ಯರಾತ್ರಿ 1:30ರ ವೇಳೆಗೆ ದೆಹಲಿಗೆ ಆಗಮಿಸಿದ ಶುಕ್ಲಾಗೆ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ಲಭಿಸಿತು.

ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹಾಗೂ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಸೇರಿದಂತೆ ಹಲವು ಗಣ್ಯರು ಅವರನ್ನು ಬರಮಾಡಿಕೊಂಡರು. ಶುಕ್ಲಾ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಬಳಿ ಕತಮ್ಮ ಊರಾದ ಲಕ್ನೋಗೆ ಪ್ರಯಾಣಿಸುವ ಸಾಧ್ಯತೆ ಇದೆ.

ಆಕ್ಸಿಯಂ-4 ಮಿಷನ್‌ನ ಭಾಗವಾಗಿ ಬಾಹ್ಯಾಕಾಶ ನಿಲ್ದಾಣದಲ್ಲಿ 18 ದಿನ ಕಳೆಯುವ ಅವಕಾಶ ಪಡೆದ ಶುಕ್ಲಾ, ಅಲ್ಲಿನ ಅನುಭವಗಳನ್ನು ಭಾರತಕ್ಕೆ ಸಂಬಂಧಿಸಿದ ಏಳು ವೈಜ್ಞಾನಿಕ ಪ್ರಯೋಗಗಳನ್ನು ದಾಖಲಿಸಿದ್ದಾರೆ. ಈ ಪ್ರಯೋಗಗಳಿಂದ ಬಂದ ಮಾಹಿತಿಯನ್ನು ಈಗ ಭಾರತೀಯ ವಿಜ್ಞಾನಿಗಳು ವಿಶ್ಲೇಷಣೆ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅದರ ಫಲಿತಾಂಶ ಹೊರಬರುವ ನಿರೀಕ್ಷೆ ಇದೆ.

ಶುಕ್ಲಾ ಆಗಸ್ಟ್ 22-23ರಂದು ನಡೆಯಲಿರುವ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ಇಸ್ರೋ ತನ್ನ ಮೊದಲ ಮಾನವ ಬಾಹ್ಯಾಕಾಶ ಹಾರಾಟಕ್ಕೆ 2027ರಲ್ಲಿ ಸಜ್ಜಾಗುತ್ತಿರುವುದರಿಂದ, ಶುಕ್ಲಾ ಅವರ ಅನುಭವಗಳು ಭಾರತೀಯ ಬಾಹ್ಯಾಕಾಶ ಸಂಶೋಧನೆಗೆ ಮಹತ್ವದ ಮಾರ್ಗದರ್ಶಕವಾಗಲಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Logged in as Ashika HD. Log out?

Please enter your comment!

error: Content is protected !!