ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಅತಿಯಾದ ಮಳೆಯಾಗುತ್ತಿದೆ. ನಾಳೆ ಕೂಡ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಜೊತೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 18-08-2025ರಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದಿದ್ದಾರೆ.