WEATHER | ಆ.24ರವರೆಗೂ ರಾಜ್ಯದ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸಾಧ್ಯತೆ, ರೆಡ್ ಅಲರ್ಟ್ ಘೋಷಣೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತ ರೂಪುಗೊಂಡಿದೆ. ಹೀಗಾಗಿ ಕರ್ನಾಟಕದಲ್ಲೂ ಹೆಚ್ಚು ಮಳೆಯಾಗುತ್ತಿದೆ. ಇಂದು ಐದು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಮೈಸೂರು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಯಾದಗಿರಿ, ಬೀದರ್, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​, ಬೆಳಗಾವಿ, ಹಾವೇರಿ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರಿನ ಬಹುತೇಕ ಕಡೆ ಭಾನುವಾರ ಮಳೆಯಾಗಿದೆ, ಇಂದು ಕೂಡ ಮೋಡ ಕವಿದ ವಾತಾವರಣವಿದೆ. ಎಚ್​ಎಎಲ್​​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!