ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಕ್ಸಿಯಂ-4 ಮಿಷನ್ ಗಗನಯಾತ್ರಿ ಶುಭಾಂಶು ಶುಕ್ಲಾ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವ ಸಾಧ್ಯತೆಯಿದೆ.
ಅಂತಾರಾಷ್ಟ್ರೀಯ ಬಾಹ್ಯಕಾಶ ನಿಲ್ದಾಣಕ್ಕೆ ಭೇಟಿ ಕೊಟ್ಟ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಶುಕ್ಲಾ ಅವರು, ಭೂಮಿಗೆ ಮರಳಿದ ಬಳಿಕ ಮೊದಲ ಬಾರಿಗೆ ತಾಯ್ನಾಡು ಭಾರತಕ್ಕೆ ಮರಳಿದ್ದಾರೆ.
ಇಂದು ಪ್ರಧಾನಿ ಮೋದಿ ಅವರನ್ನು ಶುಭಾಂಶು ಶುಕ್ಲಾ ಅವರು ಭೇಟಿಯಾಗಿ ತಮ್ಮ ಅನುಭವ ಹಂಚಿಕೊಳ್ಳಲಿದ್ದಾರೆ. ಈ ಬಗ್ಗೆ ಬಿಜೆಪಿಯು ಲೋಕಸಭೆಯಲ್ಲಿ ಚರ್ಚೆಗೆ ಪ್ರಸ್ತಾವನೆ ಇಟ್ಟಿದ್ದಾರೆ. ಮೋದಿ ಭೇಟಿ ಬಳಿಕ ಶುಕ್ಲಾ ಅವರು ತಮ್ಮ ತವರು ಲಕ್ನೋಗೆ ಪ್ರಯಾಣಿಸುವ ಸಾಧ್ಯತೆ ಇದೆ.
ಭಾನುವಾರ ಮಧ್ಯರಾತ್ರಿ 1:30ರ ವೇಳೆಗೆ ದೆಹಲಿಗೆ ಆಗಮಿಸಿದ ಶುಭಾಂಶು ಶುಕ್ಲಾಗೆ ಇಂದಿರಾ ಗಾಂಧಿ ಏರ್‌ಪೋರ್ಟ್ನಲ್ಲಿ ಅದ್ದೂರಿ ಸ್ವಾಗತ ಸಿಕ್ಕಿತ್ತು. ಕೇಂದ್ರ ಸಚಿವ ಜಿತೇಂದ್ರ ಸಿಂಗ್, ದೆಹಲಿ ಸಿಎಂ ರೇಖಾ ಗುಪ್ತಾ, ಶುಭಾಂಶು ಶುಕ್ಲಾರನ್ನ ಬರಮಾಡಿಕೊಂಡಿದ್ದರು.