February 9, 2026
Monday, February 9, 2026
spot_img

ನೈಜೀರಿಯಾದಲ್ಲಿ ಟ್ರಕ್ ಪಲ್ಟಿಯಾಗಿ ಭೀಕರ ದುರಂತ: 30 ಮಂದಿ ದುರ್ಮರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ನೈಜೀರಿಯಾದ ಕಾನೋ ರಾಜ್ಯದಲ್ಲಿ ಸಂಭವಿಸಿದ ಭೀಕರ ಟ್ರಕ್ ಅಪಘಾತದಲ್ಲಿ ಕನಿಷ್ಠ 30 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಕಾನೋದಿಂದ ಗುಜುಂಗು ಪಟ್ಟಣಕ್ಕೆ ಸರಕು ಮತ್ತು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬೃಹತ್ ಟ್ರೇಲರ್ ಟ್ರಕ್, ಗೆಜಾವಾ ಪ್ರದೇಶದ ಕ್ವಾನಾರ್ ಬಾರ್ಡೆ ಎಂಬಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಚಾಲಕನ ಅತಿ ವೇಗದ ಚಾಲನೆಯೇ ಈ ದುರಂತಕ್ಕೆ ಮುಖ್ಯ ಕಾರಣ ಎನ್ನಲಾಗಿದೆ. ವೇಗವಾಗಿ ಚಲಿಸುತ್ತಿದ್ದ ಟ್ರಕ್ ಚಾಲಕನ ಹತೋಟಿ ತಪ್ಪಿ ರಸ್ತೆಯ ಮೇಲೆ ಉರುಳಿದಾಗ, ಅದರಲ್ಲಿದ್ದ ಪ್ರಯಾಣಿಕರು ಕೆಳಕ್ಕೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಹಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಇದನ್ನೂ ಓದಿ:

ಈ ಘಟನೆಯ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಕಾನೋ ರಾಜ್ಯದ ರಾಜ್ಯಪಾಲರಾದ ಅಬ್ಬಾ ಕಬೀರ್ ಯೂಸುಫ್ ಅವರು, “ಇದು ಕೇವಲ ಸಂತ್ರಸ್ತ ಕುಟುಂಬಗಳಿಗೆ ಮಾತ್ರವಲ್ಲದೆ ಇಡೀ ಕಾನೋ ರಾಜ್ಯಕ್ಕೆ ತುಂಬಲಾರದ ನಷ್ಟ. ಈ ಹೃದಯವಿದ್ರಾವಕ ಘಟನೆಯಿಂದ ನಾವೆಲ್ಲರೂ ಸ್ತಬ್ಧರಾಗಿದ್ದೇವೆ” ಎಂದು ಶೋಕ ವ್ಯಕ್ತಪಡಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !