ಹೊಸದಿಗಂತ ವರದಿ ಬೆಂಗಳೂರು :
ನಗರದ ಹೃದಯ ಭಾಗದಲ್ಲಿರುವ ಹೆಬ್ಬಾಳ ಮೇಲ್ಸೇತುವೆ ಎಂದರೆ ಸಾಮಾನ್ಯವಾಗಿ ಯಾವಾಗಲೂ ಸಂಚಾರ ದಟ್ಟಣೆ.
ಹೆಬ್ಬಾಳ ಮೇಲ್ಸೇತುವೆ ಟ್ರಾಫಿಕ್ ಸಮಸ್ಯೆಯನ್ನು ದೂರ ಮಾಡಲು ನೂತನ ಮೇಲ್ಸೇತುವೆ ನಿರ್ಮಾಣವಾಗಿದ್ದು ಕೊನೆಗೂ ಇಂದು ಲೋಕಾರ್ಪಣೆಗೊಂಡಿದೆ. ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಹಸಿರು ನಿಶಾನೆ ತೋರಿದ್ದಾರೆ. ಕೆ ಆರ್ ಪುರಂನಿಂದ ಮೇಖ್ರಿ ಸರ್ಕಲ್ ಕಡೆ ಸಂಪರ್ಕಿಸುವ 700 ಮೀಟರ್ ಉದ್ದದ ಹೊಸ ಮೇಲ್ಸೇತುವೆಯನ್ನು 80 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ.
ಮೇಲ್ಸೇತುವೆ 700 ಮೀಟರ್ ಉದ್ದವಿದ್ದು, ಕೆ.ಆರ್. ಪುರಂ ಕಡೆಯಿಂದ ಮೇಖ್ರಿ ಸರ್ಕಲ್ ಕಡೆಗೆ ಹೋಗಲು ಈ ಮೇಲ್ಸೇತುವೆ ವಾಹನ ಸವಾರರ ಓಡಾಟಕ್ಕೆ ಸಹಕಾರಿಯಾಗಲಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಈ ಫ್ಲೈ ಓವರ್ ನಿರ್ಮಿಸಿದ್ದು, ನಿರ್ಮಾಣ ಕಾರ್ಯ ಪೂರ್ಣಗೊಳಿಸಲು 31 ತಿಂಗಳಾಗಿದೆ. ಮೇಲ್ಸೇತುವೆ ನಿರ್ಮಾಣಕ್ಕೆ 94 ಕೋಟಿಗಳ ವೆಚ್ಚವಾಗಿದೆ ಎಂದು ವರದಿ ಆಗಿದೆ.
ಮುಖ್ಯಮಂತ್ರಿ @siddaramaiah ಅವರು ಇಂದು ಬೆಂಗಳೂರಿನ ಹೆಬ್ಬಾಳ ಜಂಕ್ಷನ್ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೆ.ಆರ್.ಪುರಂ ಕಡೆಯಿಂದ ಮೇಖ್ರಿ ವೃತ್ತ ಸಂಪರ್ಕಿಸುವ ನೂತನ ಮೇಲ್ಸೇತುವೆಯನ್ನು ಲೋಕಾರ್ಪಣೆಗೊಳಿಸಿದರು.
ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಸಚಿವರಾದ ಬೈರತಿ ಸುರೇಶ್, ಬಿಡಿಎ ಅಧ್ಯಕ್ಷರಾದ ಎನ್.ಎ.ಹ್ಯಾರಿಸ್,… pic.twitter.com/e4bvq0IJEY
— CM of Karnataka (@CMofKarnataka) August 18, 2025