ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಕೇಂದ್ರ ಚುನಾವಣಾ ಆಯೋಗ ಬರೊಬ್ಬರಿ 65 ಲಕ್ಷ ನಕಲಿ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಿ ಹಾಕಿದ್ದು, ಈ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕೇಂದ್ರ ಚುನಾವಣಾ ಆಯೋಗವು ಬಿಹಾರದಲ್ಲಿ ಆರಂಭಿಸಿದ್ದಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಸಮಯದಲ್ಲಿ ಬಿಹಾರ ಮತದಾರರ ಪಟ್ಟಿಯಿಂದ ಅಳಿಸಿಹಾಕಲಾದ 65 ಲಕ್ಷ ಜನರ ಹೆಸರುಗಳನ್ನು ಬಹಿರಂಗಪಡಿಸಿದೆ.
ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ಪ್ರಕಟಿಸಲಾದ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲಾದ 65 ಲಕ್ಷ ಜನರ ಹೆಸರುಗಳನ್ನು ಚುನಾವಣಾ ಆಯೋಗ ಸೋಮವಾರ ಬಿಡುಗಡೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.