September 27, 2026
Sunday, September 27, 2026
spot_img

ಗೇಲ್ ಹಳೆ ದಾಖಲೆಗೆ ಹೆಟ್ಮೆಯರ್ ಎಳ್ಳುನೀರು: ಟಿ20 ವಿಶ್ವಕಪ್‌ನಲ್ಲಿ ವಿಂಡೀಸ್ ಪರ ಅತೀ ವೇಗದ ಫಿಫ್ಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಿ20 ವಿಶ್ವಕಪ್‌ನ ಆರಂಭದಲ್ಲೇ ವೆಸ್ಟ್ ಇಂಡೀಸ್ ತಂಡದ ಸ್ಫೋಟಕ ಬ್ಯಾಟರ್ ಶಿಮ್ರಾನ್ ಹೆಟ್ಮೆಯರ್ ಅಬ್ಬರದ ಬ್ಯಾಟಿಂಗ್ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ. ಕೇವಲ 22 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ, ಬರೋಬ್ಬರಿ 15 ವರ್ಷಗಳ ಕಾಲ ‘ಯೂನಿವರ್ಸಲ್ ಬಾಸ್’ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ದಾಖಲೆಯನ್ನು ಹೆಟ್ಮೆಯರ್ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಸ್ಕಾಟ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ, ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹೆಟ್ಮೆಯರ್ ಆರಂಭದಿಂದಲೇ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟಿದ ಅವರು ಕೇವಲ 22 ಎಸೆತಗಳಲ್ಲಿ ಫಿಫ್ಟಿ ಪೂರೈಸಿ ಮಿಂಚಿದರು.

ಇದನ್ನೂ ಓದಿ:

ಈ ಹಿಂದೆ 2009ರ ಟಿ20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಕ್ರಿಸ್ ಗೇಲ್ 23 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದು ವೆಸ್ಟ್ ಇಂಡೀಸ್ ಪರ ದಾಖಲೆಯಾಗಿತ್ತು. ಈಗ ಹೆಟ್ಮೆಯರ್ ಕೇವಲ ಒಂದು ಎಸೆತದ ಅಂತರದಲ್ಲಿ ಆ ದಾಖಲೆಯನ್ನು ಮುರಿದು, ಟಿ20 ವಿಶ್ವಕಪ್‌ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಕೆರಿಬಿಯನ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Must Read