ಹೊಸದಿಗಂತ ಡಿಜಿಟಲ್ ಡೆಸ್ಕ್:
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಪ್ರಧಾನಿ ನರೇಂಂದ್ರ ಮೋದಿ ಅವರಿಗೆ ಕರೆ ಮಾಡಿ ಅಲಾಸ್ಕಾದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಇತ್ತೀಚಿನ ಭೇಟಿಯ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಇದಕ್ಕಾಗಿ ಮೋದಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
“ನನ್ನ ಸ್ನೇಹಿತ ಅಧ್ಯಕ್ಷ ಪುಟಿನ್ ಅವರ ಫೋನ್ ಕರೆ ಮತ್ತು ಅಲಾಸ್ಕಾದಲ್ಲಿ ಅಧ್ಯಕ್ಷ ಟ್ರಂಪ್ ಅವರೊಂದಿಗಿನ ಇತ್ತೀಚಿನ ಭೇಟಿಯ ಕುರಿತು ತಮ್ಮ ಒಳನೋಟಗಳನ್ನು ಹಂಚಿಕೊಂಡಿದ್ದಕ್ಕಾಗಿ ಧನ್ಯವಾದಗಳು” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ರಷ್ಯಾ ಅಧ್ಯಕ್ಷ ಪುಟಿನ್ ಅವರಿಗೆ ಧನ್ಯವಾದ ಹೇಳಿರುವ ಪ್ರಧಾನಿ ಮೋದಿ, ರಾಜತಾಂತ್ರಿಕತೆ ಮತ್ತು ಮಾತುಕತೆಯ ಮೂಲಕ ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ಭಾರತದ ಸ್ಥಿರ ನಿಲುವನ್ನು ಒತ್ತಿ ಹೇಳಿದರು. ಕದನ ವಿರಾಮ ಒಪ್ಪಂದವಿಲ್ಲದೆ ಕೊನೆಗೊಂಡ ಅಲಾಸ್ಕಾದಲ್ಲಿ ನಡೆದ ಉನ್ನತ ಮಟ್ಟದ ಶೃಂಗಸಭೆಯ 3 ದಿನಗಳ ನಂತರ ರಷ್ಯಾ ಅಧ್ಯಕ್ಷ ಪುಟಿನ್ ಅವರು ಪ್ರಧಾನಿ ಮೋದಿ ಅವರೊಂದಿಗೆ ಫೋನ್ನಲ್ಲಿ ಮಾತನಾಡಿದರು.
ಅಲಾಸ್ಕಾದಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಇತ್ತೀಚಿನ ಸಭೆಯ ಮಾಹಿತಿಯನ್ನು ಹಂಚಿಕೊಂಡಿದ್ದಕ್ಕಾಗಿ ಮತ್ತು ದೂರವಾಣಿ ಮೂಲಕ ತಮ್ಮನ್ನು ಸಂಪರ್ಕಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಅಲಾಸ್ಕಾದಲ್ಲಿ ಪುಟಿನ್ ಡೊನಾಲ್ಡ್ ಟ್ರಂಪ್ ಅವರೊಂದಿಗೆ 3 ಗಂಟೆಗಳ ಕಾಲ ಮಾತುಕತೆ ನಡೆಸಿದರು.