ಥಿನ್ನರ್‌ ಬಾಟಲ್‌ ಜಾರಿ ಬಿದ್ದು ಮಗು ಪ್ರಾಣ ಹೋಯ್ತು! ಗಂಭೀರವಾಗಿ ಗಾಯಗೊಂಡಿದ್ದ ತಂದೆಯೂ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಥಿನ್ನರ್ ಬಾಟಲಿ ಜಾರಿ ಬಿದ್ದು ಮಗು ಸಾವನ್ನಪ್ಪಿದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ತಂದೆಯೂ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಂದು ಮೃತಪಟ್ಟಿದ್ದಾರೆ.

ಚಂದ್ರಕಾಂತ್ ಮಾಶ್ಯಾಳ ಮೃತ ದುರ್ದೈವಿ. ಧಾರವಾಡದ ಸಂತೋಷ್ ನಗರದಲ್ಲಿ ಮನೆಯಲ್ಲಿ ಕಳೆದ ಶುಕ್ರವಾರ (ಆ.15) ಬೆಂಕಿ ಕಾಯಿಸಿಕೊಳ್ಳಲೆಂದು ಕುಪ್ಪಡಿ ಇಡಲಾಗಿತ್ತು. ಈ ವೇಳೆ ಅಲ್ಲೇ ಆಟವಾಡುತ್ತಿದ್ದ 4 ವರ್ಷದ ಅಗಸ್ತ್ಯ ಥಿನ್ನರ್ ಬಾಟಲಿಯನ್ನು ಕೆಡವಿದ್ದ.

ಈ ವೇಳೆ ಥಿನ್ನರ್‌ಗೆ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆ ಬಾಲಕನ ದೇಹ ಸುಟ್ಟು ಹೋಗಿತ್ತು. ಮಗನನ್ನು ಕಾಪಾಡಲು ಹೋಗಿದ್ದ ಚಂದ್ರಕಾಂತ್‌ಗೆ ಸಹ ಗಂಭೀರವಾಗಿ ಸುಟ್ಟ ಗಾಯಗಳಾಗಿದ್ದವು. ಕೂಡಲೆ ಮನೆಯವರು ತಂದೆ, ಮಗನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಷ್ಟರಲ್ಲಾಗಲೇ ಬಾಲಕ ಅಗಸ್ತ್ಯ ಮೃತಪಟ್ಟಿದ್ದ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಂದ್ರಕಾಂತ್ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದೀಗ ತಂದೆ, ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!