ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಕೈಗಾರಿಕಾ ಅಭಿವೃದ್ಧಿಗೆ ಮತ್ತೊಂದು ದೊಡ್ಡ ಹೆಜ್ಜೆಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ಆಟೋಮೊಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ (ARAI) ಸಂಶೋಧನಾ ಕೇಂದ್ರ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮಹತ್ವದ ಯೋಜನೆಗಾಗಿ 100 ಎಕರೆ ಭೂಮಿ ಅಗತ್ಯವಿದ್ದು, ಭೂಮಿಯನ್ನು ಬೇಗ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗಾಗಲೇ ಮನವಿ ಮಾಡಿರುವುದಾಗಿ ಹೇಳಿದರು.
ಇದನ್ನೂ ಓದಿ:
ಈ ಸಂಶೋಧನಾ ಕೇಂದ್ರ ಆರಂಭವಾದರೆ ಮಂಡ್ಯ, ಮೈಸೂರು ಭಾಗದಷ್ಟೇ ಅಲ್ಲದೆ ಇಡೀ ರಾಜ್ಯದ ಆಟೋಮೊಬೈಲ್ ಉದ್ಯಮಕ್ಕೆ ಹೊಸ ಉತ್ತೇಜನ ಸಿಗಲಿದೆ. ವಾಹನಗಳ ಪರೀಕ್ಷೆ, ಪ್ರಮಾಣೀಕರಣ ಹಾಗೂ ತಾಂತ್ರಿಕ ಸಂಶೋಧನೆಗೆ ಇದು ಪ್ರಮುಖ ಕೇಂದ್ರವಾಗಲಿದೆ. ಈ ಯೋಜನೆಗೆ ಕೇಂದ್ರ ಬಜೆಟ್‌ನಲ್ಲಿ ಅನುದಾನ ಮೀಸಲಿರಿಸಲಾಗಿದೆ ಎಂದರು.
ರಾಜ್ಯಕ್ಕೆ ಇನ್ನಷ್ಟು ಅಭಿವೃದ್ಧಿ ಯೋಜನೆಗಳು ಬರಬೇಕಾದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಉತ್ತಮ ಸಹಕಾರ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.



