ವಿಪಕ್ಷಗಳ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸೆಪ್ಟೆಂಬರ್ 9ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಅವರನ್ನು ವಿಪಕ್ಷಗಳ ಇಂಡಿಯ ಬ್ಲಾಕ್‌ನ ಅಭ್ಯರ್ಥಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಘೋಷಿಸಿದ್ದಾರೆ.

ಈಗಾಗಲೇ ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರನ್ನು ಎನ್​ಡಿಎ ಬಣದ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಎನ್‌ಡಿಎಯ ಉಪರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ಅವರನ್ನು ಬೆಂಬಲಿಸುವಂತೆ ಪ್ರತಿಪಕ್ಷಗಳನ್ನು ಒತ್ತಾಯಿಸಿದರೂ ಇಂಡಿಯ ಬ್ಲಾಕ್ ಇಂದು ತನ್ನದೇ ಆದ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.

ಇಂದು ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿಯನ್ನು ಘೋಷಿಸಿದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಮುಂಬರುವ ಉಪರಾಷ್ಟ್ರಪತಿ ಚುನಾವಣೆಯು ಸೈದ್ಧಾಂತಿಕ ಯುದ್ಧವಾಗಿದೆ ಎಂದು ಹೇಳಿದ್ದಾರೆ. “ಎಲ್ಲಾ ವಿರೋಧ ಪಕ್ಷಗಳು ಒಂದಾಗಿವೆ. ಪ್ರಜಾಪ್ರಭುತ್ವದ ಮೌಲ್ಯಗಳು ದಾಳಿಗೆ ಒಳಗಾಗಿವೆ” ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!