ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈನಲ್ಲಿ ವರುಣಾರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ವಿಮಾನ, ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಮುಂಬೈನಲ್ಲಿ ಧಾರಾಕಾರ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನದಿಯಂತೆ ಹರಿಯುತ್ತಿದೆ. ಶಾಲಾ-ಕಾಲೇಜು, ಆಫೀಸ್‌ಗಳಿಗೆ ರಜೆ ಘೋಷಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ ಮುಂಬೈನ ಹಲವಾರು ಭಾಗಗಳಲ್ಲಿ 200 ಮಿ.ಮೀಗಿಂತ ಹೆಚ್ಚು ಮಳೆಯಾಗಿದ್ದು, ಪೂರ್ವ ಉಪನಗರ ವಿಖ್ರೋಲಿಯಲ್ಲಿ 255.5 ಮಿ.ಮೀಗಿಂತ ಹೆಚ್ಚು ಮಳೆಯಾಗಿದೆ. ಪನ್ವೆಲ್‌ನ ಅಟಲ್ ಸೇತು ಹೆದ್ದಾರಿಯಲ್ಲಿ ಮೊಣಕಾಲುದ್ದ ನೀರು ನಿಂತಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. 250 ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, 100ಕ್ಕೂ ಹೆಚ್ಚು ಬಸ್ ಮಾರ್ಗಗಳನ್ನು ಬದಲಿಸಲಾಗಿದೆ.