ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನನ್ನ ಟೋಲ್ ಪ್ಲಾಜಾ ಸಿಬ್ಬಂದಿ ಕಂಬಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿದ್ದ ಘಟನೆಗೆ ಸಂಬಂಧಿಸಿದಂತೆ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿ ಮೀರತ್‌ನ ಟೋಲ್ ಸಂಸ್ಥೆಗೆ 20 ಲಕ್ಷ ರೂ. ದಂಡ ವಿಧಿಸಿದೆ.
ಉತ್ತರ ಪ್ರದೇಶದ ಮೀರತ್‌ನಲ್ಲಿ ಯೋಧ ಕಪಿಲ್ ಕವಾಡ್ ಎನ್ನುವವರ ಮೇಲೆ ಟೋಲ್ ಸಿಬ್ಬಂದಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಈ ಅಮಾನವೀಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಕೆಲವು ದಾಳಿಕೋರರು ಕಪಿಲ್ ಅವರನ್ನು ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿದ್ದಾರೆ. ವಿಡಿಯೋ ವೈರಲ್ ಆಗ್ತಿದ್ದಂತೆ ಕೇಸ್ ದಾಖಲಿಸಿಕೊಂಡ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ.