ಹೊಸದಿಗಂತ ಡಿಜಿಟಲ್ ಡೆಸ್ಕ್:
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾದ ‘ಇದ್ರೆ ನೆಮ್ದಿಯಾಗ್ ಇರ್ಬೇಕು’ ಹಾಡು ಆಗಸ್ಟ್ 15 ರಂದು ಬಿಡುಗಡೆ ಆಗಬೇಕಿತ್ತು. ಆದರೆ ದರ್ಶನ್ ಮತ್ತೆ ಜೈಲು ಸೇರಿದ್ದರಿಂದ ಬಿಡುಗಡೆ ಮುಂದೂಡಿದ್ದರು. ಇದೀಗ ಈ ಹಾಡು ಬಿಡುಗಡೆಗೆ ಹೊಸ ದಿನಾಂಕವನ್ನು ಚಿತ್ರತಂಡ ನಿಗದಿ ಮಾಡಿದೆ. ಹಾಗಿದ್ರೆ ‘ಇದ್ರೆ ನೆಮ್ದಿಯಾಗ್ ಇರ್ಬೇಕು’ ಹಾಡು ಬಿಡುಗಡೆ ಯಾವಾಗ?
ಈ ಹಾಡು ಬಿಡುಗಡೆಗೆ ಹೊಸ ದಿನಾಂಕ ನಿಗದಿ ಮಾಡಲಾಗಿದೆ. ‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಹಾಡು ಇದೇ ಆಗಸ್ಟ್ 24ಕ್ಕೆ ಬೆಳಿಗ್ಗೆ 10.05 ಕ್ಕೆ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಅಧಿಕೃತವಾಗಿ ಘೋಷಣೆ ಮಾಡಿದೆ.
ಮೂಲಗಳ ಪ್ರಕಾರ ದರ್ಶನ್ ‘ಡೆವಿಲ್’ ಸಿನಿಮಾದ ಎಲ್ಲ ಕೆಲಸಗಳನ್ನು ಪೂರ್ಣಗೊಳಿಸಿದ್ದಾರೆ. ಸಿನಿಮಾದ ಚಿತ್ರೀಕರಣ, ಡಬ್ಬಿಂಗ್ ಎಲ್ಲ ಕಾರ್ಯವನ್ನೂ ಮುಗಿಸಿದ್ದಾರೆ. ಸಿನಿಮಾ ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆ ಮಾಡುವುದಾಗಿ ಘೋಷಣೆ ಆಗಿತ್ತು. ದರ್ಶನ್ ಜೈಲಿಗೆ ಹೋಗಿದ್ದರಿಂದ ಸಿನಿಮಾ ಬಿಡುಗಡೆ ತಡವಾಗಬಹುದು ಎಂದು ಅಭಿಮಾನಿಗಳು ಅಂದುಕೊಂಡಿದ್ದರು. ಆದರೆ ಮೂಲಗಳ ಪ್ರಕಾರ ನಿಗದಿಯಂತೆ ಸಿನಿಮಾ ಅಕ್ಟೋಬರ್ ತಿಂಗಳಲ್ಲಿಯೇ ಬಿಡುಗಡೆ ಆಗಲಿದೆ ಎನ್ನಲಾಗಿದೆ.